ಧರ್ಮೋಪದೇಶಕಾಂಡ 15:7 - ಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.