Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:9 - ಕನ್ನಡ ಸಮಕಾಲಿಕ ಅನುವಾದ

9 “ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:9
30 ತಿಳಿವುಗಳ ಹೋಲಿಕೆ  

ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು