ಧರ್ಮೋಪದೇಶಕಾಂಡ 16:1 - ಕನ್ನಡ ಸಮಕಾಲಿಕ ಅನುವಾದ1 ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಅಬೀಬ್ ತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |