ಧರ್ಮೋಪದೇಶಕಾಂಡ 16:11 - ಕನ್ನಡ ಸಮಕಾಲಿಕ ಅನುವಾದ11 ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ. ಅಧ್ಯಾಯವನ್ನು ನೋಡಿ |