ಧರ್ಮೋಪದೇಶಕಾಂಡ 16:14 - ಕನ್ನಡ ಸಮಕಾಲಿಕ ಅನುವಾದ14 ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.