ಧರ್ಮೋಪದೇಶಕಾಂಡ 16:15 - ಕನ್ನಡ ಸಮಕಾಲಿಕ ಅನುವಾದ15 ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲವಾಗಿ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ! ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.