Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:16 - ಕನ್ನಡ ಸಮಕಾಲಿಕ ಅನುವಾದ

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:16
29 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.


ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.


ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.


ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.


ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.


ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.


ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.


ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.


ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ. ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು