Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:19 - ಕನ್ನಡ ಸಮಕಾಲಿಕ ಅನುವಾದ

19 ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:19
35 ತಿಳಿವುಗಳ ಹೋಲಿಕೆ  

“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.


ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.


ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ಸಮುಯೇಲನು ವೃದ್ಧನಾದಾಗ ತನ್ನ ಪುತ್ರರನ್ನು ಇಸ್ರಾಯೇಲಿಗೆ ನ್ಯಾಯಾಧಿಪತಿಗಳನ್ನಾಗಿ ಮಾಡಿದನು.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.


ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.


ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು