Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:2 - ಕನ್ನಡ ಸಮಕಾಲಿಕ ಅನುವಾದ

2 ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:2
19 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.


ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.


ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.


ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.


“ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.


ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.


ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.


ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.


ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


“ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು.


ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು