Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:22 - ಕನ್ನಡ ಸಮಕಾಲಿಕ ಅನುವಾದ

22 ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:22
13 ತಿಳಿವುಗಳ ಹೋಲಿಕೆ  

“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ.


ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.


ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,


ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು