Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:3 - ಕನ್ನಡ ಸಮಕಾಲಿಕ ಅನುವಾದ

3 ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:3
27 ತಿಳಿವುಗಳ ಹೋಲಿಕೆ  

ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.


ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.


ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.


ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.


“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.


ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು