Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:4 - ಕನ್ನಡ ಸಮಕಾಲಿಕ ಅನುವಾದ

4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿಮ್ಮ ಮೇರೆಗಳಲ್ಲಿ ಎಲ್ಲಿಯೂ ಕಾಣಬಾರದು. ಮೊದಲನೆಯ ದಿವಸದ ಸಾಯಂಕಾಲದಲ್ಲಿ ನೀವು ಯಜ್ಞವಾಗಿ ಸಮರ್ಪಿಸಿದ ಮಾಂಸದಲ್ಲಿ ಏನೂ ಮರುದಿವಸದವರೆಗೆ ಉಳಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಏಳು ದಿವಸವೂ ನಿಮ್ಮ ನಾಡಿನಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿ ಇರಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಏಳು ದಿವಸವೂ ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆದ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವನ್ನು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:4
9 ತಿಳಿವುಗಳ ಹೋಲಿಕೆ  

“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು