ಧರ್ಮೋಪದೇಶಕಾಂಡ 16:6 - ಕನ್ನಡ ಸಮಕಾಲಿಕ ಅನುವಾದ6 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ಐಗುಪ್ತದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ. ಅಧ್ಯಾಯವನ್ನು ನೋಡಿ |