ಧರ್ಮೋಪದೇಶಕಾಂಡ 17:16 - ಕನ್ನಡ ಸಮಕಾಲಿಕ ಅನುವಾದ16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿ |