ಧರ್ಮೋಪದೇಶಕಾಂಡ 17:19 - ಕನ್ನಡ ಸಮಕಾಲಿಕ ಅನುವಾದ19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಮದದಿಂದ ತನ್ನ ಸ್ವದೇಶದವರನ್ನು ಹಿಯ್ಯಾಳಿಸದೆ ಯೆಹೋವನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳದೆ ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಈ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸುವದಕ್ಕೆ ಅಭ್ಯಾಸ ಮಾಡಿಕೊಳ್ಳುವಂತೆ ಈ ಗ್ರಂಥವು ಅವನ ಬಳಿಯಲ್ಲೇ ಇರಬೇಕು; ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದರಲ್ಲಿ ಓದಿಕೊಳ್ಳುತ್ತಾ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು. ಅಧ್ಯಾಯವನ್ನು ನೋಡಿ |