Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:2
26 ತಿಳಿವುಗಳ ಹೋಲಿಕೆ  

“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”


ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.


ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.


ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,


ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.


“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು.


ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,


“ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.


ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು