ಧರ್ಮೋಪದೇಶಕಾಂಡ 17:8 - ಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿ |