Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:11 - ಕನ್ನಡ ಸಮಕಾಲಿಕ ಅನುವಾದ

11 ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ, ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:11
9 ತಿಳಿವುಗಳ ಹೋಲಿಕೆ  

“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”


ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು