Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:16 - ಕನ್ನಡ ಸಮಕಾಲಿಕ ಅನುವಾದ

16 ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಲ್ಲಿ ಹಾಗೆಯೇ ಕೋರಿಕೊಂಡು - ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳಲೂ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲೂ ನಮಗೆ ಮನಸ್ಸಿಲ್ಲ; ಕೇಳಿ ನೋಡಿದರೆ ಸತ್ತೇವು ಎಂದು ನೀವು ಹೇಳಿದಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:16
8 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.


ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.


ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು.


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,


ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು