Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:18 - ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:18
40 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.


ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಇಸ್ರಾಯೇಲರ ಮುಖ್ಯಸ್ಥರೂ ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು.


ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.


ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ:


ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.


ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.


“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.


ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.


ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.


ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.


ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.


“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು