Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:22 - ಕನ್ನಡ ಸಮಕಾಲಿಕ ಅನುವಾದ

22 ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:22
13 ತಿಳಿವುಗಳ ಹೋಲಿಕೆ  

ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


“ವಿಗ್ರಹಗಳೇ, ಮುಂದೆ ಏನಾಗಲಿದೆ ಎಂದು ನಮಗೆ ಹೇಳಿ. ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು, ಅವುಗಳ ಪರಿಣಾಮವನ್ನು ಇಲ್ಲವೆ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.


ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.


ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.


ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು