Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:3 - ಕನ್ನಡ ಸಮಕಾಲಿಕ ಅನುವಾದ

3 ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ : ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವವಂದರೆ - ದನಗಳಲ್ಲಿಯಾಗಲಿ ಆಡುಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:3
7 ತಿಳಿವುಗಳ ಹೋಲಿಕೆ  

ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು.


“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.


“ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.


“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು