Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:1 - ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿರುವ ಜನಾಂಗಗಳನ್ನು ಆತನು ತೆಗೆದುಹಾಕಿಬಿಟ್ಟ ತರುವಾಯ ನೀವು ಆ ದೇಶವನ್ನು ಸ್ವಾಧೀನಕ್ಕೆ ತೆಗೆದುಕೊಂಡು ಅವರ ಗ್ರಾಮಗಳಲ್ಲಿಯೂ ಮನೆಗಳಲ್ಲಿಯೂ ವಾಸವಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:1
11 ತಿಳಿವುಗಳ ಹೋಲಿಕೆ  

ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.


ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ.


ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.


ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.


ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಯೆಹೋವ ದೇವರು ಯೆಹೋಶುವನಿಗೆ,


ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು