Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:14
9 ತಿಳಿವುಗಳ ಹೋಲಿಕೆ  

ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.


ಅವರು, “ತನ್ನ ನೆರೆಯವನ ಗಡಿ ಮೇರೆಯನ್ನು ಸರಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.


ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.


ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.


ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.


ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು