ಧರ್ಮೋಪದೇಶಕಾಂಡ 19:15 - ಕನ್ನಡ ಸಮಕಾಲಿಕ ಅನುವಾದ15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು. ಅಧ್ಯಾಯವನ್ನು ನೋಡಿ |