Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:17 - ಕನ್ನಡ ಸಮಕಾಲಿಕ ಅನುವಾದ

17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:17
9 ತಿಳಿವುಗಳ ಹೋಲಿಕೆ  

ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.


ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


“ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.


ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು