ಧರ್ಮೋಪದೇಶಕಾಂಡ 19:19 - ಕನ್ನಡ ಸಮಕಾಲಿಕ ಅನುವಾದ19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.