ಧರ್ಮೋಪದೇಶಕಾಂಡ 19:4 - ಕನ್ನಡ ಸಮಕಾಲಿಕ ಅನುವಾದ4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು. ಅಧ್ಯಾಯವನ್ನು ನೋಡಿ |