ಧರ್ಮೋಪದೇಶಕಾಂಡ 19:5 - ಕನ್ನಡ ಸಮಕಾಲಿಕ ಅನುವಾದ5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು. ಅಧ್ಯಾಯವನ್ನು ನೋಡಿ |