Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:1
7 ತಿಳಿವುಗಳ ಹೋಲಿಕೆ  

ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.


ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರ ಮಾರ್ಗವಾಗಿ ಮರುಭೂಮಿಗೆ ಹೊರಟು ಹೋಗಿರಿ,” ಎಂದು ಹೇಳಿದರು.


ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.


“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.


ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು