Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:10 - ಕನ್ನಡ ಸಮಕಾಲಿಕ ಅನುವಾದ

10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 (ತತ್ಪೂರ್ವದಲ್ಲಿ ಏಮಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕಿಮರಂತೆ ಎತ್ತರವಾದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತತ್ಪೂರ್ವದಲ್ಲಿ ಏವಿುಯರು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕ್ಯರಂತೆ ಉನ್ನತರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 (ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:10
5 ತಿಳಿವುಗಳ ಹೋಲಿಕೆ  

ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,


ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು