Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:14 - ಕನ್ನಡ ಸಮಕಾಲಿಕ ಅನುವಾದ

14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:14
24 ತಿಳಿವುಗಳ ಹೋಲಿಕೆ  

ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು.


ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು. ನಮ್ಮ ವರ್ಷಗಳನ್ನು ನಿಟ್ಟುಸಿರಿನಲ್ಲಿ ಕಳೆಯುತ್ತಿದ್ದೇವೆ.


ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.


ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


“ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.


ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,


ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.


ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು