Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:23 - ಕನ್ನಡ ಸಮಕಾಲಿಕ ಅನುವಾದ

23 ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:23
16 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,


“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.


ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.


ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.


ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.


ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.


ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು