ಧರ್ಮೋಪದೇಶಕಾಂಡ 2:24 - ಕನ್ನಡ ಸಮಕಾಲಿಕ ಅನುವಾದ24 “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ. ಅಧ್ಯಾಯವನ್ನು ನೋಡಿ |
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.