ಧರ್ಮೋಪದೇಶಕಾಂಡ 2:29 - ಕನ್ನಡ ಸಮಕಾಲಿಕ ಅನುವಾದ29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |