ಧರ್ಮೋಪದೇಶಕಾಂಡ 2:30 - ಕನ್ನಡ ಸಮಕಾಲಿಕ ಅನುವಾದ30 ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ. ಅಧ್ಯಾಯವನ್ನು ನೋಡಿ |