ಧರ್ಮೋಪದೇಶಕಾಂಡ 2:31 - ಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ತರುವಾಯ ಸರ್ವೇಶ್ವರ ನನಗೆ, ‘ಈಗ ನಾನು ಸೀಹೋನನನ್ನೂ ಅವನ ನಾಡನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನ ಮಾಡಿಕೊಳ್ಳಲು ಶುರುಮಾಡಿರಿ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ತರುವಾಯ ಯೆಹೋವನು ನನಗೆ - ಈಗ ನಾನು ಸೀಹೋನನನ್ನೂ ಅವನ ದೇಶವನ್ನೂ ನಿಮಗೆ ವಶಪಡಿಸುವದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಮಾಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |