Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:33 - ಕನ್ನಡ ಸಮಕಾಲಿಕ ಅನುವಾದ

33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:33
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.


ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”


ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು