Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:36 - ಕನ್ನಡ ಸಮಕಾಲಿಕ ಅನುವಾದ

36 ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:36
18 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ


ಅರ್ನೋನ್ ನದಿಯ ತೀರದಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸಿರ್ಯೋನ ಪರ್ವತದವರೆಗೂ ಹರಡಿತ್ತು.


ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿ ಹೋಗುವವನನ್ನೂ, ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು.


ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ,


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,


ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.


ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?


ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.


ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು