Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:5 - ಕನ್ನಡ ಸಮಕಾಲಿಕ ಅನುವಾದ

5 ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:5
13 ತಿಳಿವುಗಳ ಹೋಲಿಕೆ  

ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ”


ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.


ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:


“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು