Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:7 - ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:7
31 ತಿಳಿವುಗಳ ಹೋಲಿಕೆ  

ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.


ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ.


“ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.


ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.


ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.


ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ”


ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.


ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.


ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.


ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.


ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.


ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:


ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು