Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:14
15 ತಿಳಿವುಗಳ ಹೋಲಿಕೆ  

ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.


“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.


ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.


ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.


ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.


ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?


ಹೀಗೆ ಈ ದೇಶದ ಜನಾಂಗಗಳಿಗೆ ಸೇರದೆ ನಿಮಗೆ ದೂರವಾಗಿರುವ ಜನಾಂಗಗಳ ಪಟ್ಟಣಗಳಿಗೆಲ್ಲಾ ಹಾಗೆಯೇ ಮಾಡಬೇಕು.


ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು