Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:3 - ಕನ್ನಡ ಸಮಕಾಲಿಕ ಅನುವಾದ

3 “ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:3
31 ತಿಳಿವುಗಳ ಹೋಲಿಕೆ  

ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.


ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.


ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ನೀವು ಯುದ್ಧಕ್ಕೆ ಸಮೀಪ ಬಂದಾಗ, ಯಾಜಕನು ಹತ್ತಿರ ಬಂದು, ಯೋಧರ ಸಂಗಡ ಮಾತನಾಡಿ ಅವರಿಗೆ,


ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.


ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.


ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.


ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು