Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:7 - ಕನ್ನಡ ಸಮಕಾಲಿಕ ಅನುವಾದ

7 ಯಾವನಾದರೂ ಮದುವೆ ಮಾಡಿಕೊಂಡಿದ್ದು, ತನ್ನ ಹೆಂಡತಿಯೊಂದಿಗೆ ಸಂಸಾರ ಮಾಡಿರದಿದ್ದರೆ, ಅಂಥವನು ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ, ಬೇರೊಬ್ಬನು ಆಕೆಯನ್ನು ಸೇರಿಸಿಕೊಂಡಾನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:7
7 ತಿಳಿವುಗಳ ಹೋಲಿಕೆ  

ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.


ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು