ಧರ್ಮೋಪದೇಶಕಾಂಡ 20:8 - ಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’ ಅಧ್ಯಾಯವನ್ನು ನೋಡಿ |