Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:12 - ಕನ್ನಡ ಸಮಕಾಲಿಕ ಅನುವಾದ

12 ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತರುವಾಯ ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ತೆಗೆದುಕೊಂಡು, ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವಳನ್ನು ಮನೆಗೆ ಕರಕೊಂಡು ಬರಲಿ; ತರುವಾಯ ಅವಳು ಕ್ಷೌರಮಾಡಿಸಿಕೊಂಡು ಉಗುರುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:12
7 ತಿಳಿವುಗಳ ಹೋಲಿಕೆ  

ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.


“ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.


ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.


ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು