ಧರ್ಮೋಪದೇಶಕಾಂಡ 21:16 - ಕನ್ನಡ ಸಮಕಾಲಿಕ ಅನುವಾದ16 ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಪುರುಷನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು. ಅಧ್ಯಾಯವನ್ನು ನೋಡಿ |