ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.
ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.
ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.