Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:22 - ಕನ್ನಡ ಸಮಕಾಲಿಕ ಅನುವಾದ

22 ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:22
20 ತಿಳಿವುಗಳ ಹೋಲಿಕೆ  

ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.


ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.


ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು.


ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.


ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.


ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.


ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.


ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.


ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.


ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.


ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.


ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು