Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:23 - ಕನ್ನಡ ಸಮಕಾಲಿಕ ಅನುವಾದ

23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:23
18 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.


ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.


ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


“ ‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು.


ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.


ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.


ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು